ಅತಿ ಹೆಚ್ಚು ಓದುಗರನ್ನು ಹೊಂದಿರುವ CINIBUZZ ನಲ್ಲಿ ನಿಮ್ಮ ಸಿನಿಮಾದ ಕುರಿತ ಲೇಖನ / ಜಾಹೀರಾತು ಬೇಕಿದ್ದಲ್ಲಿ ಸಂಪರ್ಕಿಸಿ : 88615 99996

ನವದೆಹಲಿಯಲ್ಲಿ ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ

0

ಬರುವ ಆಗಸ್ಟ್ ೨೭ರ ಭಾನುವಾರದಂದು ರಾಷ್ಟ್ರ ರಾಜಧಾನಿಯಾದ ನವದೆಹಲಿಯಲ್ಲಿರುವ ಕರ್ನಾಟಕ ಸಂಘದ ಆವರಣದಲ್ಲಿ ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವವನ್ನು ಏರ್ಪಡಿಸಲಾಗಿದೆ. ಈ ಸಮಾರಂಭದಲ್ಲಿ ಸುಮಾರು ೬ ಅಡಿ ಎತ್ತರದ ಸಾಹಸಸಿಂಹ ಡಾ.ವಿಷ್ಣುವಧನ್ ಅವರ ಮೇಣದ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು. ಡಾ.ವಿಷ್ಣು ಸೇನಾ ಸಮಿತಿ ವತಿಯಿಂದ ಹಮ್ಮಿಕೊಂಡಿರುವ ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರು ಈ ಪ್ರತಿಮೆಯನ್ನು ದೆಹಲಿಯಲ್ಲಿ ಸ್ಥಾಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಮೊನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ್ ಅವರು ಆ.೨೭ರಂದು ಬೆ.೯-೩೦ರಿಂದ ನವದೆಹಲಿಯ ಕರ್ನಾಟಕ ಸಂಘದಲ್ಲಿ ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ ಕಾರ್ಯಕ್ರಮ ನಡೆಯಲಿದ್ದು, ಅದೇ ದಿನ ಡಾ.ವಿಷ್ಣುವಧನ್ ಅವರ ಮೇಣದ ಪ್ರತಿಮೆಯನ್ನು ಕೂಡ ಅನಾವರಣಗೊಳಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂಬುದಾಗಿ ತಿಳಿಸಿದರು.
ಇದೇ ಮೊದಲ ಬಾರಿಗೆ ಕರ್ನಾಟಕವನ್ನು ಬಿಟ್ಟು ಹೊರಗೆ ಅದೂ ರಾಷ್ಟ್ರದ ರಾಜಧಾನಿಯಲ್ಲಿ ಕನ್ನಡ ಕಲಾವಿದನೊಬ್ಬನ ರಾಷ್ಟ್ರೀಯ ಉತ್ಸವ ನಡೆಯುತ್ತಿರುವುದು ತುಂಬಾ ವಿಶೇಷವಾಗಿದೆ. ಈ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಈಗಾಗಲೇ ಸಕಲ ಸಿದ್ಧತೆಗಳೂ ನಡೆಯುತ್ತಿದ್ದು, ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು ಐದು ನೂರಕ್ಕೂ ಹೆಚ್ಚು ವಿಷ್ಣು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ಪ್ರಯಾಣ ಬೆಳಸಲಿzರೆ.
ಇನ್ನು ಅಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀಮತಿ ಭಾರತಿ ವಿಷ್ಣು ವರ್ಧನ್ ಅವರನ್ನು ಆಹ್ವಾನಿಸುತ್ತಿzವೆ. ಅವರು ಖಂಡಿತ ಒಪ್ಪುವ ಸಾಧ್ಯತೆಗಳಿವೆ, ಸಧ್ಯದಲ್ಲೇ ಭಾರತಿ ಮೇಡಂ ಅವರ ಜತೆ ಈ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದು ಶ್ರೀನಿವಾಸ್ ಅವರು ಮಾಧ್ಯಮಗಳಿಗೆ ತಿಳಿಸಿzರೆ.
ಈ ರಾಷ್ಟ್ರೀಯ ಉತ್ಸವದಲ್ಲಿ ವಿಷ್ಣುವರ್ಧನ್ ಅವರು ನಟಿಸಿರುವ ಚಲನಚಿತ್ರಗಳ ಭಾವಚಿತ್ರಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿದೆ. ಇದರ ಜೊತೆಗೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿಷ್ಣು ಸೇನಾ ಸಮಿತಿಯ ಶ್ರೀನಿವಾಸ್ ತಿಳಿಸಿzರೆ. ಈ ಉತ್ಸವ ನಡೆಸುತ್ತಿರುವ ವಿಷ್ಣು ಸೇನಾ ಸಮಿತಿಯ ಜೊತೆ ದೆಹಲಿ ಕನ್ನಡ ಸಂಘದ ಕಾರ್ಯದರ್ಶಿ ನಾಗರಾಜ, ಭೂ ಸಿರಿ ಚಿಟ್‌ಫಂಡ್ಸ್‌ನ ತಿಮ್ಮೇಗೌಡ ಮುಂತಾದವರು ಕೈಜೋಡಿಸಿದ್ದಾರೆ.

Share.

Leave A Reply